ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಾರ್ವಜನಿಕ ಬಸ್ ತಂಗುದಾಣ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಪುತ್ತೂರು. ಸೆ.03:   ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ದಿ. ಕಾರ್ತಿಕ್ ಮೇರ್ಲ ಅವರ ಸ್ಮರಣಾರ್ಥ ಸಂಪ್ಯದಲ್ಲಿ ಸಾರ್ವಜನಿಕ ಬಸ್ ತಂಗುದಾಣ ನಿರ್ಮಾಣವಾಗಿದ್ದು ಇಂದು ( ಸೆ.03) ಕಾರ್ತಿಕ್ ರವರ ತಂದೆ ರಮೇಶ್ ಸುವರ್ಣ ಹಾಗೂ ತಾಯಿ ಹೇಮಾವತಿ ಯವರು ಲೋಕಾರ್ಪಣೆ ಮಾಡಿದರು.

 

ಈ ಸಂದರ್ಭದಲ್ಲಿ ಹಿಂ.ಜಾ.ವೇ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ , ತಾ. ಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾ ಕೃಷ್ಣ ಆಳ್ವ , ಹಿಂ.ಜಾ.ವೇ ನಗರ ಸಮಿತಿ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮೊಗರುಗುತ್ತು ಜಿಲ್ಲಾ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸೇರಿದಂತೆ ಹಿಂ.ಜಾ.ವೇ ಯ ಪದಾಧಿಕಾರಿಗಳು, ಸದಸ್ಯರು ಹಾಗೂ ಇನ್ನಿತರ ಗಣ್ಯರು ಭಾಗಿಯಾಗಿದ್ದರು.

Also Read  2022ರಲ್ಲಿ ಅತ್ಯಂತ ಖುಷಿ ಕೊಟ್ಟ ಪುಸ್ತಕ- "ಅರಿವು" ➤ ಅನಂತ ಸುಬ್ರಹ್ಮಣ್ಯ ಶರ್ಮಾ

error: Content is protected !!
Scroll to Top