ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಮಂಪರು ಪರೀಕ್ಷೆ ಇಂದು ನಡೆಯಲಿದೆ.  ಬೆಂಗಳೂರಿನಲ್ಲಿ ಆದಿತ್ಯ ರಾವ್ ಮಂಪರು ಪರೀಕ್ಷೆ ನಡೆಯಲಿರುವುದರಿಂದ ಬುಧವಾರ ಆತನನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಾಗಿದೆ.

ಬೆಂಗಳೂರಿನ ಮಡಿವಾಳದ ಫೋರೆನ್ಸಿಕ್​​ ಸೈನ್ಸ್ ಪ್ರಯೋಗಾಲಯದಲ್ಲಿ ಆತನ ಮಂಪರು ಪರೀಕ್ಷೆ ನಡೆಯಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ. ಬಳಿಕ ಪತ್ತೆಯಾದ ಬಾಂಬ್​​ಅನ್ನು ಬಾಂಬ್ ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಫೋಟಗೊಳಿಸಿತ್ತು. ಅದಾದ ಬಳಿಕ ಆದಿತ್ಯ ರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ. ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದು, ತನಿಖೆಯ ಭಾಗವಾಗಿ ಇದೀಗ ಮಂಪರು ಪರೀಕ್ಷೆ ನಡೆಯುತ್ತಿದೆ.

Also Read  ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಗುಡ್ಡಗಾಡು ಓಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆ

error: Content is protected !!
Scroll to Top