ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.04:   ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ. ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳಿಂದ ಆಕೆ ನಾಪತ್ತೆಯಾಗಿದ್ದು, ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ.

ಕಳೆದ ದಿನ ತಂಗಿಯ ಮೊಬೈಲ್ ಗೆ ಕರೆ ಮಾಡಿದ ಅಕ್ಕ ಮನೆಯಲ್ಲಿ ನೋಡಿದ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ. ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ತಿಳಿಸಿದ್ದಾಳೆ. ಅಕ್ಕನ ಮಾತಿನಿಂದ ಆಘಾತಗೊಂಡ ತಂಗಿ ತೀವ್ರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಅಕ್ಕನಿಗೆ ಲಾಕ್ಡೌನ್ ಸಂದರ್ಭದಲ್ಲಿ ನಿಶ್ಚಿತಾರ್ಥ ನೆರವೇರಿದ್ದು, ಆಕೆ ಸಹೋದ್ಯೋಗಿ ಅಸ್ಸಾಂ ಮೂಲದ ಯುವಕನನ್ನು ಪ್ರೀತಿಸಿದ್ದಾಳೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಸಚಿವ ಸ್ಥಾನ ಸಿಗದ ಕಾರಣಕ್ಕೆ ಫುಲ್ ಗರಂ ಆದ ಕಾಂಗ್ರೆಸ್ ನಾಯಕ

error: Content is protected !!
Scroll to Top