ಎಂಬಿಎ ವಿದ್ಯಾರ್ಥಿನಿ ಅನಿಷಾ ಆತ್ಮಹತ್ಯೆ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.05:  ಎಂಬಿಎ ವಿದ್ಯಾರ್ಥಿನಿ ಅನಿಷಾ (26) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆಕೆಯ ಪ್ರಿಯಕರ, ಆರೋಪಿ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

 

ಆಗಸ್ಟ್.21 ರಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆರೋಪಿ ಚೇತನ್ ತಲೆಮರಿಸಿಕೊಂಡಿದ್ದ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುವತಿ ಮನೆಯವರಯ ಯುವಕನ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ದೂರು ದಾಖಲಿಸಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಪತ್ತೆ ವಿಭಾಗದ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಗುರುವಾರ ಬ್ರಹ್ಮಾವರ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಆರೋಪಿಯನ್ನು ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಸೆ.16ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಲಯ ಆದೇಶಿಸಿದೆ.ಪ್ರೀತಿಯ ಹೆಸರಲ್ಲಿ ಚೇತನ್ ಶೆಟ್ಟಿ ಮೋಸ ಮಾಡಿದ ಬಗ್ಗೆ ಬೇಸತ್ತು ಅನಿಷಾ ಆಗಸ್ಟ್.21 ರಂದು ಯುವಕನ ಮನೆಯ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Also Read  ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..?

error: Content is protected !!
Scroll to Top