ಉಪ್ಪಿನಂಗಡಿ : ಕೋಳಿ ಅಂಕಕ್ಕೆ ಪೊಲೀಸರ ದಾಳಿ ಮೂವರು ವಶಕ್ಕೆ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.05:  ಸರ್ಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ತಂಡವೊಂದರ ಮೇಲೆ ಗುರುವಾರ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ್ಧಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ನಾಲ್ವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.





 

ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅಡೆಕ್ಕಲ್ ಎಂಬಲ್ಲಿ ಗುರುವಾರ ದಂದು ಮದ್ಯಾಹ್ನ ಒಂದು ಗಂಟೆ ಸುಮಾರಿಗೆ ಸರ್ಕಾರಿ ಗುಡ್ಡದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಢಿ. ಈರಯ್ಯ ಹಾಗೂ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.






 

error: Content is protected !!
Scroll to Top