ನೂಜಿಬಾಳ್ತಿಲ: ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 05: ಕಡಬ ತಾಲೂಕಿನ ನೂಜಿಬಾಳ್ತಿಲ ಉ.ಹಿ.ಪ್ರಾ ಶಾಲೆಯಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಹಿರಿಯ ಪತ್ರಕರ್ತ ಖಾದರ್‌ ಸಾಹೇಬ್‌ ದೀಪ ಬೆಳಗಿಸಿ ಉದ್ಘಾಟಿಸಿದರು.

 

ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಲಕ್ಷ್ಮಣ ಗೌಡ ಸಾಂತ್ಯಡ್ಕ, ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುಂದರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಹಿರಿಯ ಶಿಕ್ಷಕಿ ಸಚಿದೇವಿ ಎಸ್‌ ಡಿ ಎಂ ಸಿ ಉಪಾಧ್ಯಕ್ಷೆ ಕಮಲಾಕ್ಷಿ ಬರೆಮೇಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾಹವಹಿಸಿದ ಎಲ್ಲರೂ ಸರ್ವಪಲ್ಲಿ ರಾಧಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಈ ಶಾಲೆಯಲ್ಲಿ ಕಳೆದ 13 ವರ್ಷಗಳಿಂದ ಶಾರೀರಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿ ಕೊಣಾಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡ ಶಾರೀರಿಕ ಶಿಕ್ಷಕ ಬಾಲಕೃಷ್ಣ ಅವರಿಗೆ ಈ ಕಾರ್ಯಕ್ರಮದಲ್ಲಿ ಶುಭ ಹಾರೈಸಿದ್ದಾರೆ.

Also Read  ಹಾವಿನಿಂದಲೇ ಕಚ್ಚಿಸಿಕೊಂಡ ಉರಗ ರಕ್ಷಕ ಸಾವು

 

 

error: Content is protected !!
Scroll to Top