ಸುಳ್ಯ: ಬೈಕ್ ಹಾಗೂ ಸ್ಕೂಟಿ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 05. ಕಲ್ಲುಗುಂಡಿಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದ ಘಟನೆ ಕಲ್ಲುಗುಂಡಿಯ ಮೇಲಿನ ಪೇಟೆಯಲ್ಲಿ ನಡೆದಿದೆ.

ಸ್ಕೂಟಿ ಹಾಗೂ ಬೈಕ್ ಸವಾರರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

error: Content is protected !!