(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05. ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಹಾಗೂ ಶ್ರೀ ವೇದವ್ಯಾಸ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ನಡೆಸಲಾಯಿತು.
ತಂದೆ, ತಾಯಿಯ ಬಳಿಕ ಮಕ್ಕಳು ಹಚ್ಚಿಕೊಳ್ಳುವುದು ಶಿಕ್ಷಕರನ್ನು, ಶಿಕ್ಷಕರ ಸ್ವಭಾವ, ಸಂಸ್ಕಾರ ಎಲ್ಲವೂ ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕøತಿ, ಆಚಾರ-ವಿಚಾರಗಳನ್ನು ತಿಳಿಸಿ ಅವರನ್ನು ಒಬ್ಬ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಬ್ದಾರಿ ಶಿಕ್ಷಕರ ಮೇಲಿದೆ. ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶಾಲಾ ಸಂಸ್ಕøತ ಶಿಕ್ಷಕ ಸತ್ಯಶಂಕರ ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಉಮೇಶ್ ಮಾತನಾಡಿದರು. ಎಸ್.ಡಿಎಂಸಿ ಸದಸ್ಯ ನಾರಾಯಣ ಗೌಡ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವೇದವ್ಯಾಸ ವಿದ್ಯಾಲಯದ ಮುಖ್ಯ ಶಿಕ್ಷಕ ಪ್ರಶಾಂತ್ ವಂದಿಸಿದರು.