ಕೌಶಲ್ಯ ಕರ್ನಾಟಕ ಯೋಜನೆ – ಉಚಿತ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖಾ ಅಧೀನಕ್ಕೆ ಒಳಪಟ್ಟ ಕೆ.ಜಿ.ಟಿ.ಟಿ.ಐ (ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್) ಸಂಸ್ಥೆಯಲ್ಲಿ ಮುಖ್ಯ ಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ “ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್(ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ” ಕೋರ್ಸ್‍ಗಳಲ್ಲಿ ಉಚಿತ ಉದ್ಯೋಗಾಧಾರಿತ ಅಲ್ಪಾವಧಿ ಕೌಶಲ್ಯ ತರಬೇತಿ ಕಾರ್ಯಕ್ರಮ ಸೆಪ್ಟೆಂಬರ್ 21 ರಿಂದ ಮುಂದುವರಿಸಲು ಯೋಜನೆ ರೂಪಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಮಂಗಳೂರಿನ ಕದ್ರಿ ಐ.ಟಿ.ಐ ಕ್ಯಾಂಪಸ್‍ನಲ್ಲಿರುವ ಕೆ.ಜಿ.ಟಿ.ಟಿ.ಐ ಕಚೇರಿಯನ್ನು ಸಂಪರ್ಕಿಸಬಹುದು. ಸಿ.ಸಿ.ಎನ್.ಎ ತರಬೇತಿಗೆ ಕಂಪ್ಯೂಟರ್ ಸೈನ್ಸ್ / ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪದವಿಯನ್ನು, ಉಳಿದ ಕೋರ್ಸ್‍ಗಳಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ 18 ರಿಂದ 35 ವಯೋಮಿತಿಗೊಳಪಟ್ಟ ಅಭ್ಯರ್ಥಿಗಳು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ, ಮಂಗಳೂರು ದೂರವಾಣಿ ಸಂಖ್ಯೆ: 0824-2211477, 0824-2981877 ಸಂಪರ್ಕಿಸುವಂತೆ ಮಂಗಳೂರು ಕೆ.ಜಿ.ಟಿ.ಟಿ.ಐ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group