ಲಾರಿ- ಕಾರು ಅಪಘಾತ ➤ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ತಹಶೀಲ್ದಾರ್



(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಸೆ. 06. ಲಾರಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಕಾರಣ ಕೋಪಗೊಂಡ ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಎಂಬವರು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.





ತಹಶೀಲ್ದಾರ್ ಮಲ್ಲಿಕಾರ್ಜುನ್ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇತರಿಂದ ಕೋಪಗೊಂಡ ತಹಶೀಲ್ದಾರ್‌ ಲಾರಿ ಚಾಲಕನ ಮುಖಕ್ಕೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.






ಈ ವೇಳೆ ಸ್ಥಳದಲ್ಲಿದ್ದವರು ಲಾರಿ ಚಾಲಕನ ಸಹಾಯಕ್ಕೆ ಬಂದಿದ್ದು, ತಹಶೀಲ್ದಾರ್ ವರ್ತನೆಯನ್ನು ಪ್ರಶ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!
Scroll to Top