ಕಾರುಗಳ ನಡುವೆ ಢಿಕ್ಕಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 06. ಎರಡು ಕಾರುಗಳ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಉದಯನಗರ ತಿರುವಿನಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಐಕಾನ್ ಕಾರಿನ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿದ ಪರಿಣಾಮ ಐಕಾನ್ ಕಾರು ಚಾಲಕನಿಗೆ ಗಾಯಗಳಾಗಿದ್ದು, ಗಾಯಾಳುವನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Scroll to Top