ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.

 

 

ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ ಎಸ್ಕೇಪ್​ ಆಗಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ,  ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಈ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಘಟನೆ ನಡೆದು ಮೂರು ದಿನವಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಲಿಲ್ಲ ಎನ್ನಲಾಗಿದೆ.

Also Read  ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

 

 

error: Content is protected !!
Scroll to Top