ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ➤ ಸಿಸಿಬಿಯಿಂದ ನಟಿ ಸಂಜನಾ ಮನೆ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 08. ಸ್ಯಾಂಡಲ್‌ವುಡ್‌ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಮಂಗಳವಾರ ಬೆಳಿಗ್ಗೆ ನಟಿ ಸಂಜನಾ ಮನೆ ಮೇಲೆ ಸಿಸಿಬಿ ಪೋಲಿಸರು ದಾಳಿ ನಡೆಸಿದ್ದಾರೆ.

ಇಂದಿರಾನಗರದಲ್ಲಿರುವ ನಟಿ ಸಂಜನಾ ಮನೆ ಮೇಲೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಮೂರು ವಾಹನಗಳಲ್ಲಿ ಬಂದ 10ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂಜನಾ ಅವರ ಮೊಬೈಲ್‌ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು, ಬಿ.ಎಂ.ಡಬ್ಲ್ಯೂ ಕಾರನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾತೆ. ಕಾರು ಅರ್ಚನಾ ಗರ್ಲಾನಿ ಅವರ ಹೆಸರಿನಲ್ಲಿದೆ. ಆದರೆ, ಅರ್ಚನಾ ಗರ್ಲಾನಿ ಯಾರು ಎಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಹೆಚ್ಚಿನ ವಿಚಾರಣೆ ನಡೆಸಲು ಸಂಜನಾ ಅವರನ್ನು ಕರೆದೊಯ್ಯುವ ಸಾಧ್ಯತೆಯಿದೆ.

Scroll to Top