ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.08: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

 

ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Also Read  ಕೌಟುಂಬಿಕ ಕಲಹ ➤ ವಿಡಿಯೋ ಕರೆ ಮಾಡಿ ಆತ್ಮಹತ್ಯೆಗೈದ ಕೇಂದ್ರ ಕಾರಾಗೃಹದ ವಾರ್ಡನ್

 

error: Content is protected !!
Scroll to Top