ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.

 

 

2020 ರ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ ಕರಾವಳಿ ಮತ್ತು ,ಮಲೆನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಮತ್ತು ಅಪಾರ ಪ್ರಮಾಣದಲ್ಲಿ ಜೀವಹಾನಿ , ಮಳೆ ಹಾನಿ, ಬೆಳೆ ಹಾನಿ ಮತ್ತು ಸಾರ್ವಜನಿಕ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ. ರಾಜ್ಯ ಸರಕಾರವು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ಆಗಸ್ಟ್‌ 2020 ರ ಮಾಹೆಯಲ್ಲಿ ಅತಿವೃಷ್ಟಿ/ಪ್ರವಾಹ ಎದುರಿಸಿದ 23 ಜಿಲ್ಲೆಗಳ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ತಾಲೂಕುಗಳು ಎಂದು ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದಿರೆ, ಪುತ್ತೂರನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್‌ / ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರಕಾರದ ಆದೇಶ / ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರಕಾರವು ಆದೇಶಿಸಿದೆ.

Also Read  ಇತ್ತೀಚೆಗೆ ನಡೆದ ಗ್ರಾಮ ಸಭೆಯನ್ನು ಅಮಾನ್ಯಗೊಳಿಸಿ ಮತ್ತೊಮ್ಮೆ ಗ್ರಾಮ ಸಭೆ ನಡೆಸುವಂತೆ ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿ ವತಿಯಿಂದ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ

 

 

error: Content is protected !!
Scroll to Top