ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ ➤ CID ಗೆ ಒಪ್ಪಿಸಲು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. MBA  ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ ಕಳೆದುಕೊಂಡಿದ್ದರು. ಸಾವಿಗೂ ಮುನ್ನ ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆಯಲಾಗಿತ್ತು. ಅನಿಶಾ ಮತ್ತು ಚೇತನ್ ಆರು ವರ್ಷದಿಂದ ಪ್ರೀತಿಸುತ್ತಿದ್ದರು.

 

 

ಇಬ್ಬರ ಮನೆಗಳಲ್ಲಿ ರಾದ್ಧಾಂತ ಆಗಿ ಮದುವೆ ಸಾಧ್ಯವಿಲ್ಲ ಎಂದಾಗ ಅನಿಶಾ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಅನಿಶಾ ಸಾವಿನ ತನಿಖೆ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.ಈ ಪ್ರಕರಣದ ಪ್ರಮುಖ ಆರೋಪಿ ಚೇತನ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಅನಿಶಾ ಪೂಜಾರಿಯ ಸಾವಿಗೆ ಸಂಬಂಧಿಸಿದಂತೆ ದೊರಕಿರುವ ಸಾಕ್ಷ್ಯ ಮತ್ತು ದೃಶ್ಯ ಚಿತ್ರದಿಂದ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕುಟುಂಬಸ್ಥರು ಭಾವಿಸಿದ್ದರು. ಇದೀಗ ಅನಿಶಾ ಪೂಜಾರಿ ಸಾವಿನ ಕುರಿತು ಬಹಳಷ್ಟು ಸಂಶಯ ಮೂಡಿ ಬಂದಿರುವುದರಿಂದ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಲಾಗುತ್ತಿದೆ. ಹೀಗಾಗಿ ಹೈ ಕೋರ್ಟ್‍ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Also Read  ಗ್ರಾಮೀಣ ಕ್ರೀಡೆಗಳ ಪ್ರೋತ್ಸಾಹಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟಗಳ ಸಹಕಾರ ಅಗತ್ಯ ➤ ಡಿಸಿ ರವಿಕುಮಾರ್

 

error: Content is protected !!
Scroll to Top