ಪ್ರಶಸ್ತಿ ವಿಜೇತರಾದ ಬೆಳ್ತಂಗಡಿಯ ಶಿಕ್ಷಕ ಎಸ್‌.ಯಾಕೂಬ್‌ ಸೇರಿದಂತೆ ಮೂರು ಶಿಕ್ಷಕರಿಗೆ ಮುಖ್ಯಮಂತ್ರಿಯಿಂದ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.11: ಮಾಜಿ ರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜಯಂತಿಯಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಕರ್ನಾಟಕ ಜಂಟಿಯಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌‌.ಯಡಿಯೂರಪ್ಪ ಅವರು ಶುಕ್ರವಾರ ಉದ್ಘಾಟಿಸಿದರು.

 

 

ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಂದರ್ಭ ರಾಜ್ಯ ಶಿಕ್ಷಣ ಇಲಾಖೆಯಿಂದ ಆಯ್ಕೆಯಾದ ಉತ್ತಮ ಶಿಕ್ಷಕರನ್ನು ಗೌರವಿಸಲಾಯಿತು. ಪ್ರಶಸ್ತಿ ವಿಜೇತ ಮೂವರು ಶಿಕ್ಷಕರಾದ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್‌.ಯಾಕೂಬ್‌‌, ಅಫ್ಜಲ್ಪುರದ ಬಂದರವಾಡದ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಸುರೇಖಾ ಜಗನ್ನಾಥ್ ಹಾಗೂ ಬೆಂಗಳೂರಿನ ಜಾಲಹಳ್ಳಿಯ ಕೆ.ವಿ. ಮುಖ್ಯಶಿಕ್ಷಕಿ ಚೆಮ್ಮಲಾರ್ ಷಣ್ಮುಗಮ್ ಅವರನ್ನು ಗೌರವಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಶಿಕ್ಷಣ ಸುಧಾರಣಾ ಸಲಹೆಗಾರ ಹಾಗೂ ಪಿಇಎಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Also Read  ಚೆಕ್‌ ಅಮಾನ್ಯ ಪ್ರಕರಣ    ➤ 6 5.69 ಲಕ್ಷ ರೂ. ದಂಡ

 

 

error: Content is protected !!
Scroll to Top