‘ಕೈಗಾರಿಕಾ ಸ್ಪಂದನ’ ➤ ಕೈಗಾರಿಕೋದ್ಯಮಿಗಳ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ  ಸೆಪ್ಟೆಂಬರ್ ಕೊನೆಯ ವಾರದಲ್ಲಿ ಜಿಲ್ಲಾ ಮಟ್ಟದ ‘ಕೈಗಾರಿಕಾ ಸ್ಪಂದನ’ ಕಾರ್ಯಕ್ರಮವು ನಡೆಯಲಿದೆ.


ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲುಗಳು, ಸಲಹೆಗಳು ಇದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಎಯ್ಯಾಡಿ, ಮಂಗಳೂರು ಇವರಿಗೆ ಸೆಪ್ಟೆಂಬರ್ 19 ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Scroll to Top