‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12 :ನಾಳೆಯಿಂದ ‘ಸಾರ್ವಜನಿಕ ಗ್ರಂಥಾಲಯ’ ತೆರೆಯಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದೆ. ಹೌದು, ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.

 

ಕೋವಿಡ್ ಸೋಂಕಿನ ಹಿನ್ನೆಲೆ ‘ಸಾರ್ವಜನಿಕ ಗ್ರಂಥಾಲಯವನ್ನು ಮುಚ್ಚಲಾಗಿತ್ತು.ಇದೀಗ ನಾಳೆಯಿಂದ ನಾಳೆಯಿಂದ ಸಾರ್ವಜನಿಕ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಾತ್ರವಲ್ಲದೆ ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ತಪಾಸಣೆ ನಡೆಸಬೇಕು ಎಂದು ಇದೇ ವೇಳೆ ಸೂಚನೆ ನೀಡಲಾಗಿದೆ.ಅನ್ ಲಾಕ್ 4 ಮಾರ್ಗಸೂಚಿ ಪ್ರಕಾರ ಕಂಟೈನ್ ಮೆಂಟ್ ಹೊರತುಪಡಿಸಿ ಹೊರಗಿನ ಪ್ರದೇಶಗಳಲ್ಲಿ ಗ್ರಂಥಾಲಯಗಳು ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ.

Also Read  ಕಂಬಳ ಪ್ರೇಮಿ, ಕಡಬದ ಎಸ್ಇಎಸ್ ಚಿಕನ್ ಸೆಂಟರ್ ಮಾಲಕ ಅಬ್ದುಲ್ ಖಾದರ್ ನಿಧನ

 

 

error: Content is protected !!
Scroll to Top