ಮೂಡುಬಿದಿರೆ ತಹಸೀಲ್ದಾರ್ ಅನಿತಾಲಕ್ಷ್ಮೀ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಸೆ. 12 : ಕಳೆದ 14 ತಿಂಗಳುಗಳಿಂದ ಮೂಡುಬಿದಿರೆ ತಹಸೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿತಾಲಕ್ಷ್ಮೀ ಅವರು ಮೂಡುಬಿದಿರೆಯಿಂದ ಮಂಗಳೂರಿಗೆ ವರ್ಗಾವಣೆಗೊಂಡು ಚುನಾವಣೆ ವಿಭಾಗದ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಬಡವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮೂಡುಬಿದಿರೆ ತಾಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದ್ದರು. ಅಕ್ರಮವಾಗಿ ನಡೆಯುತ್ತಿದ್ದ ಮರಳು ಮಾಫಿಯಾ ಮತ್ತು ಕೆಂಪು ಕಲ್ಲಿನ ಕೋರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುತ್ತಿದ್ದ ಅವರು ರಾಜಕರಣಿಗಳ ಕೆಂಗಣ್ಣಿಗೆ ಗುರಿಯಾಗಿ ಈ ಹಿಂದೆ ಎರಡು ಬಾರಿ ವರ್ಗಾವಣೆಗೆ ಪ್ರಯತ್ನಗಳಾಗಿತ್ತು.

Also Read  ನಾಳೆ (ಜ. 06): ಜಿಲ್ಲಾ ಗ್ರಾಮೀಣ ಮಟ್ಟದ ಕ್ರೀಡಾಕೂಟ

 

 

error: Content is protected !!
Scroll to Top