ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.12: ಇಂದಿನಿಂದ ದೇಶಾದ್ಯಂತ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ಈಗಾಗಲೇ 230 ರೈಲುಗಳು ಸಂಚಾರ ಪ್ರಾರಂಭಿಸಿವೆ. ಈ ನಡುವೆ ಇದೀಗ ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಮತ್ತೆ 80 ಹೊಸ ವಿಶೇಷ ರೈಲುಗಳನ್ನು ಬಿಡಲಾಗಿದೆ. ಇದರ ಸೀಟು ಕಾಯ್ದಿರಿಸುವಿಕೆ ಪ್ರಕ್ರಿಯೆಯೂ ಗುರುವಾರದಿಂದ ಪ್ರಾರಂಭವಾಗಿದೆ ಎನ್ನಲಾಗಿದೆ.

 

 

ಈ ಬಗ್ಗೆ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ.ಯಾದವ್ ತಿಳಿಸಿದ್ದಾರೆ. ಹಾಗೇ ಪ್ರಯಾಣಿಕರು ರೈಲಿನಲ್ಲಿ ಪ್ರಯಾಣ ಮಾಡುವಾಗ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವೆನ್ನಲಾಗಿದೆ.

Also Read  ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

error: Content is protected !!
Scroll to Top