ಕಡಬ ಟೌನ್ ಜುಮಾ ಮಸೀದಿಯ ಅಧ್ಯಕ್ಷ ಎಸ್. ಅಬ್ದುಲ್ ಖಾದರ್ ಹಾಜಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಇಲ್ಲಿನ ಟೌನ್ ಜುಮಾ ಮಸೀದಿಯ ಅಧ್ಯಕ್ಷ, ಸಾಮಾಜಿಕ ಧುರೀಣ ಎಸ್. ಅಬ್ದುಲ್ ಖಾದರ್ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದೊಂದು ವಾರದಿಂದ ಬಾಧಿಸಿದ್ದ ಜ್ವರದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದಲೂ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ನಿಧನರಾದರು. ಕಡಬ ಮಂಡಲ ಪಂಚಾಯತ್ ಸದಸ್ಯರಾಗಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ, ಸಾಮಾಜಿಕ ರಾಜಕೀಯ, ಧಾರ್ಮಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಕಳೆದೆರಡು ದಶಕಗಳಿಂದ ಕಡಬ ಟೌನ್ ಜುಮಾ ಮಸೀದಿಯ ಅಧ್ಯಕ್ಷರಾಗಿದ್ದರು.

Also Read  ಮಂಗಳೂರು: 'ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ' ➤ಆರೋಪಿ ಬಂಧನ

error: Content is protected !!
Scroll to Top