ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.13: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

 

ಕರಾವಳಿ ಜಿಲ್ಲೆಗಳಲ್ಲಿ ಸೆ.17ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

 

 

Scroll to Top