(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.14: ಇತ್ತೀಚೆಗೆ ನಡೆದಿದ್ದ ತ್ರಿಬಲ್ ಮರ್ಡರ್ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆಂಧ್ರ ಮೂಲದ ವಿಜಿ(25), ಮದ್ದೂರಿನ ಅರೆಕಲ್ ದೊಡ್ಡಿಯ ಗಾಂಧಿ(28) ಹಾಗೂ ತೊಪ್ಪನಹಳ್ಳಿಯ ಮಂಜು(30) ಬಂಧಿತ ಆರೋಪಿಗಳು.ಮಂಡ್ಯ ಜಿಲ್ಲೆಯ ಗುತ್ತಲಿನ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಕೊಲೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ತೆರಳಿದ್ದರು. ಈ ವೇಳೆ ಕಳ್ಳರು ಪೊಲೀಸರ ಮೇಲೆ ಚಾಕು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಪಿಎಸ್‌ಐ ಶರತ್ ಕುಮಾರ್ ಹಾಗೂ ಪೇದೆಗಳಾದ ಅನಿಲ್ ಕುಮಾರ್ ಮತ್ತು ಕೃಷ್ಣಕುಮಾರ್ ಅವರಿಗೆ ಗಾಯವಾಗಿದೆ. ಈ ಹಿನ್ನೆಲೆ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿ ಬಳಿಕ ಅರೆಸ್ಟ್ ಮಾಡಿದ್ದಾರೆ.