ಸಂಜನಾ ಗಲ್ರಾನಿ ಮತ್ತೆ ಮೂರು ದಿನ CCB ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿ ನಟಿ, ಆರೋಪಿ ಸಂಜನಾ ಗಲ್ರಾನಿ ಅವರ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.

 

 

ಸಂಜನಾರನ್ನು ಮತ್ತೆ 3 ದಿನಗಳ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಒಪ್ಪಿಸಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಂಜನಾ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿ ನಟಿಯನ್ನು ಐದು ದಿನಗಳ ಕಾಲ ತನ್ನ ವಶಕ್ಕೆ ನೀಡುವಂತೆ ಸಿಸಿಬಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದರು. ಆದರೆ ಕೋರ್ಟ್ ಸೆಪ್ಟೆಂಬರ್ 16ರ ವರೆಗೆ ಮಾತ್ರ ಸಿಸಿಬಿ ವಿಶಕ್ಕೆ ನೀಡಿದೆ.

Also Read  ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ

 

error: Content is protected !!
Scroll to Top