ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

 

ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು ನೇರವಾಗಿಯೇ ನೀಡಲಾಗುತ್ತಿದೆ. ಆದಷ್ಟು ಬೇಗ ಗುಣಮುಖರಾಗುತ್ತಾರೆ ಎಂದು ವಿಡಿಯೋದಲ್ಲಿ ಚರಣ್ ಹೇಳಿದ್ದಾರೆ .

Also Read  ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಕೆ ➤ ನಿಯಮ ಮೀರಿದ್ರೆ "ಈ" ಶಿಕ್ಷೆ - ದ.ಕ. ಡಿಸಿ

 

 

error: Content is protected !!
Scroll to Top