ರಾಜ್ಯದ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಸಿದ್ಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ರಾಜ್ಯದ ಮೊದಲ ಕಿಸಾನ್ ರೈಲು ಸೇವೆ ಸೆ. 19ರಂದು ಆರಂಭಗೊಳ್ಳಲಿದ್ದು, ಬೆಂಗಳೂರಿನಿಂದ ದೆಹಲಿ ನಡುವೆ ಸಂಚರಿಸಲಿದೆ. ಪ್ರಸಕ್ತ ಸಾಲಿನ ಕೇಂದ್ರ ಬಜೆಟ್​ನಲ್ಲಿ ಘೋಷಿಸಿದಂತೆ ಕೃಷಿ ಉತ್ಪನ್ನಗಳನ್ನು ಸಾಗಿಸುವುದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಚಾಲನೆ ಪಡೆದುಕೊಂಡಿರುವ ಕಿಸಾನ್ ರೈಲು ಈಗಾಗಲೇ ಉತ್ತರ ಭಾರತದ ಹಲವು ನಗರಗಳಲ್ಲಿ ಸೇವೆ ಆರಂಭಿಸಿದೆ.

ಈ ರೈಲಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್, ಕ್ಯಾಪ್ಸಿಕಂ, ಮೆಣಸಿನಕಾಯಿ, ಇನ್ನಿತರ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬಹುದಾಗಿದೆ. ಅದರ ಜತೆಗೆ ಹಾಲು, ಮಾಂಸ, ಮೀನು ಸೇರಿದಂತೆ ಬೇಗನೆ ಕೆಡಬಲ್ಲ ಪದಾರ್ಥಗಳನ್ನೂ ಸಾಗಿ ಸಬಹುದಾಗಿದೆ. ಅದಕ್ಕಾಗಿ ಕೋಲ್ಡ್ ಸ್ಟೋರೇಜ್ ಬೋಗಿಗಳನ್ನು ಅಳವಡಿಸಲಾಗಿದೆ.

Also Read  ರಾಜ್ಯದ 3 ಸಾವಿರ ಕಾಲೇಜುಗಳಲ್ಲಿ ಬಂದ್ ಗೆ ಕರೆ ➤ ವಿದ್ಯಾರ್ಥಿಗಳ ಬೇಡಿಕೆಗಳೇನು ???

 

error: Content is protected !!
Scroll to Top