ಕುವೈಟ್ ಏರ್ ಪೋರ್ಟ್ ನಲ್ಲಿ ಕಾಣೆಯಾಗಿದ್ದ ಉಡುಪಿಯ ಮಹಿಳೆ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 16. ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಉಡುಪಿಯ ಮಹಿಳೆಯೋರ್ವರನ್ನು ಅಲ್ಲಿನ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಕುವೈತ್ನಲ್ಲಿ ಮನೆ ಕೆಲಸವನ್ನು ನಿರ್ವಹಿಸುತ್ತಿದ್ದ ಮಹಿಳೆಯು ಭಾರತಕ್ಕೆ ವಾಪಾಸ್ ಆಗಲೆಂದು ವಿಮಾನ ನಿಲ್ದಾಣಕ್ಕೆ ಬಂದಿದ್ದು, ಅಲ್ಲಿಂದ ನಾಪತ್ತೆಯಾಗಿದ್ದರು.
ಮಹಿಳೆ ಟಿಕೆಟ್ ಪಡೆದಿದ್ದು, ವಿಮಾನ ನಿಲ್ದಾಣದ ಬೋರ್ಡಿಂಗ್ನಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಎಮಿಗ್ರೆಷನ್ ಕ್ಲಿಯರೆನ್ಸ್ ವೇಳೆ ಅಲ್ಲಿನ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಎಮಿಗ್ರೆಷನ್ ಕ್ರಿಯರೆನ್ಸ್ ವೇಳೆ ಕೆಲವು ತೊಂದರೆಗಳನ್ನು ಎದುರಿಸಿದೆ ಎಂದು ಮಹಿಳೆಯು ವಿಮಾನ ನಿಲ್ದಾಣದಿಂದ ತನ್ನ ಮಗಳಿಗೆ ತಿಳಿಸಿದ್ದರು, ಬಳಿಕ ತಾಯಿಯನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆ ಪುತ್ರಿಯು ಸಾಮಾಜಿಕ ಜಾಲತಾಣದಲ್ಲಿ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಆಡಿಯೋ ಅಪ್ಲೋಡ್ ಮಾಡಿ ಸಹಾಯವನ್ನು ಕೋರಿದ್ದರು. ಈ ಬಗ್ಗೆ ತಿಳಿದ ಕೆಲವು ಮುಖಂಡರು ಮಹಿಳೆಯ ಬಗ್ಗೆ ಮಾಹಿತಿ ಪಡೆದು ಅವರು ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿಸಿದರು.

Also Read  ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

error: Content is protected !!
Scroll to Top