ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.16:  ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರೋ ಸಚಿವ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸಚಿವ ಬೊಮ್ಮಾಯಿ ಬೆಂಗಳೂರಿನ ನಿವಾಸದಲ್ಲಿ ಪ್ರತ್ಯೇಕವಾಗಿರೋದಾಗಿ ಮಾಹಿತಿ ನೀಡಿದ್ದಾರೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದೆ ಆರೋಗ್ಯವಾಗಿದ್ದೇನೆ ಎಂದಿರುವ ಅವರು ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ತಪಾಸಣೆ ಮಾಡಿಸಿಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ. ಎಂದಿದ್ದಾರೆ

Also Read  ಅರಣ್ಯದಲ್ಲಿ ಆಕಸ್ಮಿಕ ಕಾಡ್ಗಿಚ್ಚು ಪ್ರಕರಣ ➤ಗಂಭೀರ ಗಾಯಗೊಂಡ ಸಿಬ್ಬಂದಿಯೋರ್ವ ಮೃತ್ಯು

 

error: Content is protected !!
Scroll to Top