ಹಾಡುಹಗಲೇ ಅಂಗಡಿಗೆ ನುಗ್ಗಿ ನಗದು ದೋಚಿದ ಪ್ರಕರಣ ➤ 48 ಗಂಟೆಯೊಳಗೆ ಹಣದ ಜೊತೆ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 16.ರಬ್ಬರ್ ಅಂಗಡಿಯೊಂದರ ಡ್ರಾವರ್ ನಿಂದ ಒಂದು ಲಕ್ಷ ರೂಪಾಯಿ ಕಳವುಗೈದ ಪ್ರಕರಣವನ್ನು ಕೇವಲ 48 ಗಂಟೆಯಲ್ಲಿ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅಂಬೊಟ್ಟು ಮನೆ ನೇಜಿಕಾರು ನಿವಾಸಿ ಮೊಹಮ್ಮದ್ ಶಾಫಿ ಎಂದು ಗುರುತಿಸಲಾಗಿದೆ. ಕಳವುಗೈದ ಆರೋಪಿ ಪರಾರಿಯಾಗಿದ್ದು, ಈತನನ್ನು ಬಂಧಿಸಿ ಕಳವುಗೆಯ್ಯಲಾದ ಒಂದು ಲಕ್ಷ ರೂಪಾಯಿ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 60,000/- ರೂಪಾಯಿ ಮೌಲ್ಯದ KA21 U 6006 ನೇ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.

ತಿಂಗಳಾಡಿಯ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿದ್ದ ಶಿಹಾಬ್ ಎಂಬವರ ಅಂಗಡಿಯಿಂದ ಸೆ. 14ರಂದು ಮಧ್ಯಾಹ್ನ ಬೈಕಿನಲ್ಲಿ ಬಂದ ಯುವಕನೋರ್ವ ಡ್ರಾವರ್ ನಲ್ಲಿದ್ದ ಒಂದು ಲಕ್ಷ ರೂ ದೋಚಿ ಪರಾರಿಯಾಗಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಪುತ್ತೂರು ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿ, ಡಿ.ಸಿ.ಐ.ಬಿ. ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ತನಿಖಾ ತಂಡವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಹಕರಿಸಿದ್ದಾರೆ.

Also Read  ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ಸರ್ಕಾರದ ಹಗರಣ ಬಯಲಿಗೆ ► ಶಪಥ ಹಾಕಿದ ಯಡಿಯೂರಪ್ಪ

error: Content is protected !!
Scroll to Top