(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.20. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ದಸರಾ ರಜೆಯನ್ನು ಸೆಪ್ಟೆಂಬರ್ 21 ರಿಂದ ಅಕ್ಟೋಬರ್ 5 ರವರೆಗೆ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅ.6 ರಂದು ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದ್ದು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾಸಂಸ್ಥೆಗಳಿಗೆ ಈ ರಜೆ ಅನ್ವಯಿಸುತ್ತದೆ. ದಸರಾ ರಜೆಯನ್ನು ನವರಾತ್ರಿ ಸಂದರ್ಭದಲ್ಲಿಯೇ ನೀಡುವಂತೆ ಸಾವ೯ಜನಿಕರ, ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ದಸರಾ ರಜೆ ಬದಲಾಯಿಸಿದೆ ಎಂದು ಅರಣ್ಯ ಹಾಗೂ ದ.ಕ. ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.