ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಕಲಚೇತನರಿಗೆ ಉಚಿತ ವ್ಹೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಬಿಜೆಪಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ನಗರ ಇದರ ವತಿಯಿಂದ ಪ್ರಧಾನಿಯವರ 70ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ವಿಕಲಚೇತನರಿಗೆ ಉಚಿತ ವೀಲ್ ಚಯರ್ ವಿತರಿಸುವ ಮೂಲಕ ಶಾಸಕ ಶ್ರೀ. ಕೆ ರಘುಪತಿ ಭಟ್ ಭಾಗವಹಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ನಗರ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿ ಸಲೀಂ ಅಂಬಾಗಿಲು, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ್ ಮತ್ತು ಸ್ಥಳೀಯ ನಗರಸಭಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Also Read  ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ

error: Content is protected !!
Scroll to Top