ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳ ಸಹಿತ 6 ವಾಹನಗಳನ್ನು ವಶಕ್ಕೆ ಪಡೆದ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಮನೆಯೊಂದರಲ್ಲಿ ಜುಗಾರಿ ನಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ವು ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಲ್ಲದೇ, ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ ಆರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಜನರಿಗೆ ಹಣ ಪಡೆದು ಮತ ಹಾಕುವುದರಲ್ಲೇ ಆಸಕ್ತಿ!   ➤ ಹೈಕೋರ್ಟ್ ಕಿಡಿ..!

error: Content is protected !!
Scroll to Top