(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಕೊರೋನಾ ಕಾರಣವನ್ನು ನೆಪ ಮಾಡಿಕೊಂಡು ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಡಿ.ವೈ.ಎಫ್.ಐ ಸಮಿತಿಯಿಂದ ಆರೋಗ್ಯಾಧಿಕಾರಿ ಕಛೇರಿಯ ಎದುರು ವಿಶಿಷ್ಟವಾಗಿ ಪ್ರತಿಭಟನೆ ಮಾಡಲಾಯಿತು.
ಕೊರೋನಾ ಸೋಂಕಿತ ರೋಗಿಗಳನ್ನು ಚಿಕಿತ್ಸೆಯ ಹೆಸರಲ್ಲಿ ವಂಚನೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಂಡು, ಎಲ್ಲಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಣಕು ಶವಗಳನ್ನಿಟ್ಟು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಡಿವೈಎಫ್.ಐ ಜಿಲ್ಲಾದ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ನಿತಿನ್ ಕುತ್ತಾರ್, ಆಶಾ ಬೋಳೂರು, ಮನೋಜ್ ವಾಮಂಜೂರು, ರಫೀಕ್ ಹರೇಕಳ, ಅಶ್ರಫ್ ಕೆ.ಸಿ.ರೋಡ್ ಮುಂತಾದವರು ಉಪಸ್ಥಿತರಿದ್ದರು.