ಬೆಳ್ಳಾರೆ: ಯುವಕ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 19. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಾರು ಎಂಬಲ್ಲಿ ನಡೆದಿದೆ.





ಆತ್ಮಹತ್ಯೆ ಮಾಡಿಕೊಂಡವರನ್ನು ನೆಟ್ಟಾರು ಗ್ರಾಮದ ಲಕ್ಷ್ಮೀಶ ಕಿನ್ನಿಮಜಲು (34 ವರ್ಷ) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು ಬೆಳ್ಳಾರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಸೆ.18 ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದ ಇವರು, ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದ್ದು, ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ, ತಂದೆ- ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.






error: Content is protected !!
Scroll to Top