ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19:  ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಸೋಮವಾರಕ್ಕೆ ಮುಂದೂಡಿದೆ.

 

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ, ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಎನ್​ಡಿಪಿಎಸ್​​ ಕೋರ್ಟ್​​ ಮುಂದೂಡಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ ಕೆಲವರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

Also Read  ಕಡಬ: ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ವಸ್ತ್ರ ಮಾರಾಟ ಮಳಿಗೆ ಶುಭಾರಂಭ

error: Content is protected !!
Scroll to Top