(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಮಳೆಯ ಆರ್ಭಟಕ್ಕೆ ಹಲವು ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಮುಳುಗಿವೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಬೆಳೆ ನಾಶ ಪರಿಣಾಮ ರೈತರು ಆಕಾಶಕ್ಕೆ ನೋಡುವಂತಾಗಿದೆ. ಈ ಎಲ್ಲಾ ಆಸ್ತಿ- ಪಾಸ್ತಿ ನಷ್ಟ್ಟಗಳ ಮಧ್ಯೆ ರಾಜ್ಯಾದ್ಯಂತ ಮತ್ತೆ ಮಹಾಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ಆತಂಕಿತರಾಗುವಂತೆ ಮಾಡಿದೆ.
ಭಾನುವಾರ ಹಾಗೂ ಸೋಮವಾರ ಕರ್ನಾಟಕ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗ ಮತ್ತೆ ಕರಾವಳಿ ಭಾಗ, ಬಳ್ಳಾರಿ, ಧಾರವಾಡ ಮತ್ತು ಚಿಕ್ಕಮಂಗಳೂರಿನಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತಿದೆ.