ಸಿದ್ದವಾಯ್ತು ಸ್ಕೂಟರ್ ನಿಂದ ಮಿನಿ ಟಿಪ್ಪರ್ ➤ ಸವಣೂರಿನ ಯುವಕನಿಂದ ವಿಭಿನ್ನ ಅವಿಷ್ಕಾರ

(ನ್ಯೂಸ್ ಕಡಬ) newskadaba.com ಸವಣೂರು, ಸೆ20:  ಕೃಷಿ ಚಟುವಟಿಕೆಗಳಿಗೆ ಉಪಯೋಗಿಸುವಂತಹ ಸಣ್ಣ ಟಿಪ್ಪರ್ ಒಂದನ್ನು ದಕ್ಷಿಣಕನ್ನಡದ ಹಳ್ಳಿಯ ಯುವಕನೊಬ್ಬ ತಯಾರಿಸಿ ಗಮನ ಸೆಳೆದಿದ್ದಾನೆ. ಕಡಬ ತಾಲೂಕಿನ ಸವಣೂರಿನ ಬಂಬಿಲ ನಿವಾಸಿ ಪುರುಷೋತ್ತಮ್ ಈ ಸಣ್ಣ ಟಿಪ್ಪರ್ ನ ಆವಿಷ್ಕಾರ ಮಾಡಿದ್ದು, ಸ್ಕೂಟರ್ ಒಂದನ್ನು ಮಾರ್ಪಾಡು ಮಾಡಿ ಈ ಟಿಪ್ಪರ್ ಸಿದ್ಧ ಮಾಡಲಾಗಿದೆ.

 

ತೋಟದ ಮಧ್ಯೆ ಕಿತ್ತ ಕಳೆಗಳನ್ನು ಸ್ಥಳಾಂತರಿಸಲು, ತೋಟಕ್ಕೆ ಮಣ್ಣು ಹಾಕಲು, ಅಡಿಕೆ ಲೋಡ್ ಮಾಡಲು ಹೀಗೆ ವಿವಿಧ ಕೆಲಸಗಳಿಗೆ ಈ ಟಿಪ್ಪರ್ ಅನ್ನು ಬಳಸಬಹುದಾಗಿದೆ. ಗಿಡ ಹಾಗೂ ಇತರ ಬೆಳೆಗಳಿರುವ ತೋಟದ ಮಧ್ಯೆ ಲಾರಿಗಳು ಸಂಚರಿಸುವುದು ಸಾಧ್ಯವಿಲ್ಲದ ಕಾರಣ ಈ ಟಿಪ್ಪರ್ ಲಾರಿಯ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲಿದೆ ಎನ್ನುವುದು ಮಿನಿ ಟಿಪ್ಪರ್ ಸಿದ್ಧಗೊಳಿಸಿದ ಪುರುಷೋತ್ತಮ್ ಅಭಿಪ್ರಾಯ. 130 ಸಿಸಿ ಇಂಜಿನ್ ಹೊಂದಿರುವ ಸ್ಕೂಟರ್ ಅನ್ನು ತನಗೆ ಬೇಕಾದ ರೀತಿಯಲ್ಲಿ ಮಾರ್ಪಾಡು ಮಾಡಿಕೊಂಡಿರುವ ಇವರು ಸ್ಕೂಟರ್ ಗೆ ಹಲವು ಎಕ್ಸ್ಟ್ರಾ ಫಿಟ್ಟಿಂಗ್ ಕೂಡಾ ಮಾಡಿಕೊಂಡಿದ್ದಾರೆ. ಟಿಪ್ಪರ್ ಹಿಂದೆ ಮುಂದೆ ಸಲೀಸಾಗಿ ಸಾಗುವಂತೆ ಮಾಡಲು ಗೇರ್ ಬಾಕ್ಸ್ ಅಳವಡಿಸಲಾಗಿದೆ. ಅಲ್ಲದೆ ಇದಕ್ಕೆ ರಿವರ್ಸ್ ಗೇರ್ ಅನ್ನೂ ಫಿಟ್ ಮಾಡಲಾಗಿದ್ದ, 3 ಫೀಟ್ ಅಗಲದ ಬಾಡಿಯನ್ನೂ ನಿರ್ಮಿಸಲಾಗಿದ್ದು , ಎರಡು ಕ್ವಿಂಟಾಲ್ ತೂಕ ಹೊರುವ ಸಾಮರ್ಥ್ಯವನ್ನೂ ಹೊಂದಿದೆ.ಈತನ ಕಾರ್ಯಕ್ಕೆ ಶಾಸಕ ಎಸ್ ಅಂಗಾರರವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Also Read  ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! - ಬಸ್ ಚಾಲಕ ಅಮಾನತು

error: Content is protected !!
Scroll to Top