ನಾಲ್ಕನೇ ದಿನಕ್ಕೆ ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಬುಧವಾರದಂದು ತೀವ್ರ ರೂಪದಲ್ಲಿ ಮುಂದುವರಿದಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಇಂದು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Also Read  ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018' ► ಮಾನಸಿಕ ಆರೋಗ್ಯ ಜಾಗೃತಿ ಇಂದಿನ ಅಗತ್ಯ:ಕಾಡ್ಲೂರು ಸತ್ಯನಾರಾಯಣಾಚಾರ್ಯ

ಆದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಲಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

https://youtu.be/nmdjiGd2wTg

error: Content is protected !!
Scroll to Top