ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿದ ಆಟೋರಿಕ್ಷಾ ಪಲ್ಟಿ ➤ ಆಟೋ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.20. ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಮೃತ ರಿಕ್ಷಾ ಚಾಲಕನನ್ನು ಕೊಂಬಾರು ಗ್ರಾಮದ ಕಾಯರ್ತಡ್ಕ ನಿವಾಸಿ ಕೃಷ್ಣ ಪ್ರಸಾದ್(20) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಏನೆಕಲ್ಲು ಸಮೀಪದ ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾ ಪಲ್ಟಿಯಾಗಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಗಂಭೀರ ಗಾಯಗೊಂಡ ಕೃಷ್ಣ ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top