ಮಂಗಳೂರು : ನೀರುಮಾರ್ಗದಲ್ಲಿ ಬಾಯ್ತೆರೆದ ರಸ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ20:  ನಗರದ ಹೊರವಲಯದ ನೀರುಮಾರ್ಗ ಎಂಬಲ್ಲಿ ರಸ್ತೆ ಬಾಯ್ತೆರೆದರೆ, ಅದ್ಯಪಾಡಿಯಲ್ಲಿ ಗುಡ್ಡ ಕುಸಿತಗೊಂಡಿದೆ. ನಗರದ ಹೊರವಲಯದ ನೀರುಮಾರ್ಗದಲ್ಲಿ ಕಟಿಂಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿತವಾಗಿದೆ. ರಸ್ತೆ ಸಂಪೂರ್ಣವಾಗಿ ಎರಡು ಭಾಗವಾಗಿದ್ದು, ಸಂಚಾರ ಸ್ಥಗಿತವಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ.

 

 

ಅಳಪೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮನೆಯ ಕಂಪೌಂಡ್ ಗೋಡೆಗಳು ಕುಸಿದಿದ್ದು, ಗಾಯಗೊಂಡಿರುವ ಇಬ್ಬರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಜಪೆ ಸಮೀಪದ ಅದ್ಯಪಾಡಿ ಸಮೀಪದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಯ ಮೇಲೆ ಮಣ್ಣು ರಾಶಿ ಬಿದ್ದಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

Also Read  RBI ನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರ ಅಧಿಕಾರ ಸ್ವೀಕಾರ

error: Content is protected !!
Scroll to Top