ಚಾಲಕನ ಅತಿವೇಗದ ಪರಿಣಾಮ ಸುಳ್ಯದಲ್ಲಿ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ20:  ಮಳೆಯ ಅಬ್ಬರದ ನಡುವೆಯು ಸರಣಿ ಅಪಘಾತಗಳು ಬೆಳಕಿಗೆ ಬರುತ್ತಿದೆ. ಇಂದು ಹೋಂಡಾ, ಡಿಯೋ, ಟೊಯೊಟೊ ಇನ್ನೋವಾ ಕಾರು ಮತ್ತು ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.

 

ಮಂಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಇನೋವಾ ಕಾರು ಅಯ್ಯಪ್ಪ ಮಂದಿರದ ಬಳಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಸಂಚರಿಸಿ ಎದುರಿನಿಂದ ಬರುತ್ತಿದ್ದ ಸ್ಕೂಟಿಸಯ ಹಿಂಬದಿಯಲ್ಲಿ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸರಣಿ ಅಪಘಾತದಲ್ಲಿ ಮೂರು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಹಾನಿ ಉಂಟಾಗಿಲ್ಲ. ಇನ್ನೋವಾ ಚಾಲಕನ ಅತಿಯಾದ ವೇಗವೇ ಸರಣಿ ಅಪಘಾತಕ್ಕೆ ಕಾರಣವೆಂದು ಸ್ಥಳಿಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ . ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

error: Content is protected !!

Join the Group

Join WhatsApp Group