ಬಹುಮಹಡಿ ಕಟ್ಟಡ ಕುಸಿತ ➤ ಎಂಟು ಮಂದಿ ಮೃತ್ಯು | 25 ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 21. ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಕನಿಷ್ಟ 8 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಡೆದಿದೆ.

ಘಟನೆಯಲ್ಲಿ ಇನ್ನು 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿರುವ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ 3.30ರ ಸಮಯದಲ್ಲಿ ಮೂರು ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅದರಲ್ಲಿ 8 ಮಂದಿ ಮೃತಪಟ್ಟರೆ 20 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಇನ್ನೂ 25ಕ್ಕೂ ಅಧಿಕ ಮಂದಿ ಅಪಾಯದಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ ಎಂದು ತಿಳಿದು ಬಂದಿದೆ.

Also Read  ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು

error: Content is protected !!
Scroll to Top