ತಡರಾತ್ರಿ ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21:  ವೃದ್ಧ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಅವರ ನಿವಾಸದಲ್ಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರಿನ ನಿವೇದಿತಾ ನಗರದಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ಸುಮಾರಿಗೆ ಆಗಮನಿಸಿದ ಇಬ್ಬರು ಹಂತಕರು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರ ಮನೆಗೆ ಆಗಮಿಸಿ ಕಾಲಿಂಗ್‌ ಬೆಲ್‌ ಒತ್ತಿದ್ದಾರೆ.

ಬಳಿಕ ಬಾಗಿಲು ತೆರೆಯುತ್ತಿದ್ದಂತೆ ಪರಶಿವಮೂರ್ತಿ ಅವರಿಗೆ ಇರಿದಿದ್ದಾರೆ. ಎದೆ, ಹೊಟ್ಟೆ ಮತ್ತು ಕುತ್ತಿಗೆ ಭಾಗಗಳಿಗೆ ಮನಸೋ ಇಚ್ಛೆ ಚುಚ್ಚಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದೊಂದಿಗೆ ಮನೆಯ ಹಾಲ್‌ಗೆ ಬಂದ ಇವರು ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಪರಶಿವಮೂರ್ತಿ ಅವರು ಲೇವಾದೇವಿ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಈ ವ್ಯವಹಾರದಲ್ಲಿ ಉಂಟಾದ ವೈಮನಸ್ಸಿನಿಂದ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Also Read  ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

error: Content is protected !!
Scroll to Top