ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಆರೋಪ ➤ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು‌‌, ಸೆ. 21. ಕದ್ರಿ ಪಾರ್ಕ್ ರಸ್ತೆ ಕಾಮಗಾರಿಯ ವಿಳಂಬ ನೀತಿಯ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರಿಂದ ಸೆ. 21ರಂದು ನಗರದ ಸರ್ಕ್ಯೂಟ್ ಹೌಸ್ ಬಳಿ ಪ್ರತಿಭಟನೆ ನಡೆಸಲಾಯಿತು.


ಈ ಸಂದರ್ಭ ಮಾಜಿ ಶಾಸಕ ಜೆ.ಆರ್. ಲೋಬೋ ಮಾತನಾಡಿ, ಕದ್ರಿ ಪಾರ್ಕ್ ರಸ್ತೆಯ ಕಾಮಗಾರಿಯು ಸಂಪೂರ್ಣವಾಗಿ ವಿಫಲವಾಗಿದ್ದು, ನಗರ ಪ್ರದೇಶಗಳಲ್ಲಿ ಸಾಕಷ್ಟು ಹಣವನ್ನು ವ್ಯರ್ಥ ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯ ವಿಚಾರದಲ್ಲಿ ಸರ್ಕಾರ ಹಾಗೂ ಸ್ಥಳೀಯ ಶಾಸಕರು ವಿಫಲವಾಗಿದ್ದಾರೆ ಎಂದು ಆರೋಪವನ್ನು ಮಾಡಿದರು.

ಕದ್ರಿ ರಸ್ತೆಯು ಪ್ರವಾಸೋದ್ಯಮ ಸ್ಥಳವಾಗಿರುವುದರಿಂದ ಮತ್ತು ಅಲ್ಲಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಈ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗಮನ ಹರಿಸಿ, ಉದ್ಯಾನದೊಳಗೆ ಕುಳಿತುಕೊಳ್ಳುವಂತಹ ಆಸನವನ್ನು ವ್ಯವಸ್ಥಿತಗೊಳಿಸಬೇಕು. ಸಂಗೀತ ಕಾರಂಜಿ ಹಾಗೂ ಆಟಿಕೆಯ ರೈಲು ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿದೆ. ನಗರದ ಹಲವಾರು ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚಿನ ಹಣವನ್ನು ಖರ್ಚು ಮಾಡಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್, ಸಲೀಂ, ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.

Also Read  5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ

error: Content is protected !!
Scroll to Top