ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣ ➤ 12 ವರ್ಷದ ಬಳಿಕ ಆರೋಪಿ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22:  ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್‌ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

 

2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಶೋಯಬ್‌ ಭಾಗಿಯಾಗಿದ್ದ.ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿ ಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.ಸಿಸಿಬಿಯ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು, ಖಚಿತ ಮಾಹಿತಿ ಮೇರೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದ ಬಳಿಕ ಪರಾರಿಯಾಗಿದ್ದ ಶೋಯಿಬ್, 12 ವರ್ಷಗಳಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದ.

Also Read  ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ - ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ

 

error: Content is protected !!
Scroll to Top