ಭಾರತೀಯ ಚಿತ್ರರಂಗದ ಖ್ಯಾತ ನಟಿ ಕೊರೋನಾಗೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22:  ಮಾರಕ ಕೊರೋನಾಗೆ ಇಂದು ಭಾರತ ಚಿತ್ರರಂಗದ ಖ್ಯಾತ ಚಲನಚಿತ್ರ ನಟಿ ಬಲಿಯಾಗಿದ್ದಾರೆ. ಮರಾಠಿ ನಟಿ ಆಶಾಲತಾ ವಾಬ್​ಗಾಂವ್ಕರ್​ಇಂದು ಮುಂಜಾನೆ 4.45ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿದ್ದು, ತಮ್ಮ ಮಗನನ್ನು ಅಗಲಿದ್ದಾರೆ.ಆಶಾಲತಾ ವಬ್‌ಗಾಂವಕರ್ ಅವರು ಟಿವಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಸತಾರಾಗೆ ಬಂದಿದ್ದರು. ಚಿತ್ರೀಕರಣದ ಸೆಟ್‌ನಲ್ಲಿ 20 ಮಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆಶಾಲತಾ ಅವರು ಸತಾರಾದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಶಾಲತಾ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆರಂಭದ ದಿನಗಳಲ್ಲಿ ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ, ಆಶಾಲತಾ ಮರಾಠಿಯಲ್ಲಿಯೂ ಬಹು ಖ್ಯಾತ ನಟಿಯಾಗಿ ಗುರುತಿಸಿಕೊಂಡಿದ್ದರು. ಹಲವಾರು ಟಿವಿ ಧಾರಾವಾಹಿಗಳಲ್ಲಿ ಆಶಾಲತಾ ನಟಿಸಿದ್ದರು.

Also Read  ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

error: Content is protected !!
Scroll to Top