ಸೆ. 25ರಂದು ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ದೇಶಾದಾದ್ಯಂತ ಭಾರೀ ವಿವಾದಕ್ಕೀಡಾಗಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲ್ಪಟ್ಟಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಸೂದೆಯನ್ನು ವಿರೋಧಿಸಿ ಇದೇ ಸೆಪ್ಟೆಂಬರ್ 25ರಂದು ಕರ್ನಾಟಕ ಬಂದ್ ಮಾಡುವಂತೆ ರೈತ ಸಂಘಟನೆಗಳು ಕರೆ ಕೊಟ್ಟಿವೆ.

ರೈತ ಸಂಘಟನೆಗಳ ಕರೆಯಂತೆ ರಾಜ್ಯವ್ಯಾಪಿ ಬಂದ್‍ ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳು ಹೆಚ್ಚಿವೆ. ಈ ಸಂಘಟನೆ ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ- ಉಬರ್, ಆಟೋ, ಟ್ಯಾಕ್ಸಿ ಸಂಘಟನೆಗಳು ಸೇರಿದಂತೆ 32ಕ್ಕೂ ಹೆಚ್ಚು ಸಂಘ- ಸಂಸ್ಥೆಗಳ ಬೆಂಬಲ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Also Read  ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ➤ ಓರ್ವ ಮೃತ್ಯು, ಹಲವರಿಗೆ ಗಾಯ

error: Content is protected !!