ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಭಡ್ತಿಗೊಂಡು ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ರವರಿಗೆ ಮುಂಬಡ್ತಿ ನೀಡಿರುವ ರಾಜ್ಯ ಸರಕಾರವು ಕೃಷಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿದೆ.

ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ಸರಕಾರದ ಅಧೀನ ಕಾರ್ಯದರ್ಶಿ ವೃಂದದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸೇವೆಗಳು ಮತ್ತು ಸಮನ್ವಯ ವಿಭಾಗದ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಿ ಆದೇಶಿಸಿದೆ‌.

Scroll to Top