ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ – News Kadaba

ಅರಂತೋಡು: ಸೆ. 26ರಂದು ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಎಸ್ಕೆಎಸ್ಸೆಸ್ಸೆಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ಕೆಎಸ್ಸೆಸ್ಸೆಫ್ ಸುಳ್ಯ ಕ್ಲಸ್ಟರ್, ಎಸ್ಕೆಎಸ್ಸೆಸ್ಸೆಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ & ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ಸಾರ್ವಜನಿಕ ರಕ್ತದಾನ ಶಿಬಿರ, ರಕ್ತ ವರ್ಗೀಕರಣ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹದ ಕಾರ್ಯಕ್ರಮವು ಸೆ.26 ರಂದು 9 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಖತೀಬರಾದ ಅಲ್ಹಾಜ್ ಇಸ್ಹಾಕ್ ಬಾಖವಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್ಕೆಎಸ್ಸೆಸ್ಸೆಫ್ ಸುಳ್ಯ ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ ವಹಿಸಲಿದ್ದಾರೆ. ಸಮಾರಂಭದಲ್ಲಿ ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯದ್ ಅಮೀರ್ ತಂಙಳ್, Skssf ವಿಖಾಯ ಚೇರ್ಮನ್ ಸಯ್ಯದ್ ಇಸ್ಮಾಯಿಲ್ ತಂಙಳ್, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಮ್.ಬಿ. ಸದಾಶಿವ, ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯಾಧ್ಯಕ್ಷ ಕೆ.ಎಸ್. ಜಮಾಲುದ್ದೀನ್ ಬೆಳ್ಳಾರೆ, ದ.ಕ. ಎಸ್ಕೆಎಸ್ಸೆಸ್ಸೆಫ್ ವಿಖಾಯ ಉಸ್ತುವಾರಿ ಇಸಾಖ್ ಹಾಜಿ ತೋಡಾರ್, ಕೆ.ವಿ.ಜಿ ಮೆಡಿಕಲ್ ಕಾಲೇಜು ವೈದ್ಯರಾದ ಡಾ| ಹರ್ಷವರ್ಧನ್, ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು ಜಮಾಅತ್ ಅಧ್ಯಕ್ಷರಾದ ಅಶ್ರಫ್ ಗುಂಡಿ, ಪಠೇಲ್ ಮೆಡಿಕಲ್ ಮಾಲಕರಾದ ಬದ್ರುದ್ದೀನ್ ಪಠೇಲ್, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರಾದ ಉನೈಸ್ ಪೆರಾಜೆ, ದ.ಕ. ವಿಖಾಯ ರಕ್ತದಾನಿ ಉಸ್ತುವಾರಿ ತಾಜುದ್ದೀನ್ ಟರ್ಲಿ, ಸುಳ್ಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ಚೇರ್ಮನ್ ಶರೀಫ್ ಅಜ್ವಾವರ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್ ಸೇರಿದಂತೆ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ವಿಖಾಯ ಕ್ಲಸ್ಟರ್ ಕನ್ವೀನರ್ ತಾಜುದ್ದೀನ್ ಅರಂತೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top